Thursday, June 29, 2017

ಅಂಧಂತಮಸು ಇನ್ನಾರಿಗೆ (ರಾಗ - ಭೈರವಿ, ತಾಳ - ಅಟ)

ಅಂಧಂತಮಸು ಇನ್ನಾರಿಗೆ ಗೋವಿಂದನ
ನಿಂದಿಸುವರಿಗೆ

ಸಂದೇಹವಿಲ್ಲವು ಸಾರಿಸಾರಿಗೆ ವಾಯು-
ನಂದನನ ವಂದಿಸದವರಿಗೆ
ಮಾತುಮಾತಿಗೆ ಹರಿಯ ನಿಂದಿಸಿ-ಸ-
ರ್ವೋತ್ತಮ ಶಿವನೆಂದು ವಾದಿಸಿ
ಧಾತುಗ್ರಂಥಗಳೆಲ್ಲ ತೋರಿಸಿ -ವೇ-
ದಾಂತ ಪ್ರಮಾಣಗಳ ಹಾರಿಸಿ
ಸೋತು ಸಂಕಟ ಪಟ್ಟು ಘಾತಕ ಒಡಲೊಳಗಿಟ್ಟು
ನೀತಿ ಹೇಳುವ ಕೆಟ್ಟ ಜಾತಿಗಳಲ್ಲದೆ || 1 ||

ಮೂಲಕವತಾರಕ್ಕೆ ಭೇದವು-ಮುಖ್ಯ
ಶೀಲಪಂಡಿತರೊಳಗೆ ಅತಿ ವಾದವು
ಲೀಲಾಸಾದೃಶ್ಯವ ತೋರುವ ಲಿಂಗ-
ಭಂಗವಿಲ್ಲದ ದೇಹ ಹಾರುತ
ಮೂಲಗುರುವು ಕುಂತೀಬಾಲನೆನ್ನದೆ ವೃಥಾ
ಶೀಲಗೆಟ್ಟಂಥ ಖಳರಿಗಲ್ಲದೆ ಮತ್ತೆ || 2 ||

ವ್ಯಾಸರ ಮಾತುಗಳಾಡುತ-ವಿ-
ಶ್ವಾಸಘಾತಕತನ ಮಾಡುತ
ದೋಷವೆಂದರೆ ನುಡಿ ಕೇಳದೆ-ಸಂ-
ತೋಷವೆಂದರೆ ನೋಡಿ ಬಾಳದೆ
ಶೇಷಶಯನ ಆದಿಕೇಶವರಾಯನ
ದಾಸರೊಡೆಯ ಮಧ್ವ ದ್ವೇಷಿಗಳಿಗಲ್ಲದೆ || 3 ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment