ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ
ಭಯವು ಇನ್ಯಾತಕಯ್ಯಾ
|| ಪ ||
ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ || ಅ.ಪ ||
ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಭೀತಿ
|| ೧ ||
ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ
|| ೨ ||
ಪುರಂದರವಿಠಲನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ
|| ೩ ||
ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು
No comments:
Post a Comment