ಸತತ ಗಣನಾಥ ಸಿದ್ಧಿಯನೀವ ಕಾರ್ಯದಲಿ
ಮತಿ ಪ್ರೇರಿಸುವಳು ಪಾರ್ವತಿದೇವಿ ಮು-
ಕುತಿ ಪಥಕೆ ಮನವೀವ ಮಹರುದ್ರದೇವರು ಭ-
ಕುತಿದಾಯಕಳು ಸಿರಿ ಭಾರತಿದೇವಿ ಯು-
ಕುತಿ ಶಾಸ್ತ್ರಗಳಲ್ಲಿ ವನಜಸಂಭವನರಸಿ
ಸತ್ಕರ್ಮಗಳ ನಡೆಸಿ ಸುಜ್ಞಾನಮತಿಯಿತ್ತು ಮತಿ
ಪಾಲಿಸುವ ನಮ್ಮ ಪವಮಾನನು
ಚಿತ್ತದಲಿ ಆನಂದ ಸುಖನೀವಳು ರಮಾ ಭ-
ಕುತ ಜನರೊಡೆಯ ನಮ್ಮ ಪುರಂದರವಿಠ್ಠಲನು
ಸತತ ಇವರಲಿ ನಿಂತು ಕೃತಿಯ ನಡೆಸುವನು
ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು
No comments:
Post a Comment