ಅಂಬೆಗಾಲಿಕ್ಕುತಲಿ ಬಂದ ಗೋವಿಂದ
|| ಪ ||
ಅಂಬುಜನಾಭ ದಯದಿಂದೆನ್ನ ಮನೆಗೆ
|| ಅ.ಪ ||
ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನಳೆದು ಮೂರಡಿಯ ಮಾಡಿ ಬಂದ
ಕುಲನಾಶ ವನವಾಸ ನವನೀತ ಚೋರನಿವ
ಲಲನೆಯರ ವೃತಭಂಗ ಪಾವನತುರಂಗ
|| ೧ ||
ಕಣ್ಣ ಬಿಡುವನು ತನ್ನ ಬೆನ್ನ ತಗ್ಗಿಸುವ
ಮಣ್ಣ ಕೆದರಿ ಕೋರೆ ಬಾಯನ್ನ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣನಣ್ಣ ಬೆಣ್ಣೆಯ ಕಳ್ಳ
ಮಾನವ ಬಿಟ್ಟು ಕುದುರೆಯನೇರಿದ
|| ೨ ||
ನೀರ ಪೊಕ್ಕನು ಗಿರಿಯ ನೆಗಹಿ ಧರಣಿಯ ತಂದು
ನರಮೃಗ ಬಲಿಬಂಧ ಕೊರಳಗೊಯಿಕ
ಶರಮುರಿದೊರಳೆಳೆದು ನಿರ್ವಾಣಿ ಹಯ ಹತ್ತಿ
ಪುರಂದರವಿಠಲನು ಮನೆಗೆ ತಾ ಬಂದ || ೩ ||
ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು
No comments:
Post a Comment