Monday, July 3, 2017

ಅರಿತು ನಡೆಯಲುಬೇಕು (ರಾಗ - ಮುಖಾರಿ, ತಾಳ - ಝಂಪೆ)

ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆ
ಅರಿಯದಿದ್ದರೆ ನರಕವೇ ಪ್ರಾಪ್ತಿ ||  ||

ದುರ್ಜನರ ಮನೆಯ ಪಾಯಸಾನ್ನಕಿಂತ
ಸಜ್ಜನರ ಮನೆಯ ರಬ್ಬಳಿಗೆ ಲೇಸು
ಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ ಬಲು
ದುರ್ಜನರ ಸಂಗ ಬಲು ಭಂಗ ಹರಿಯೆ ||  ||

ಭಕ್ತಹೀನರ ಮನೆಯ ಪಟ್ಟ ಸುಪತ್ತಿಗೆಗಿಂತ
ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು
ಮುಕ್ತಿ ಮಾರ್ಗವ ತೋರ್ಪ ಮುರಹರನ ದಾಸರನು
ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ || ||

ಆಶೆಕಾರರ ಮನೆಯ ವಿಲಾಸ ಸುಖಕ್ಕಿಂತ
ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು
ಭೂಸುರ ಪ್ರಿಯ ಕಾಗಿನೆಲೆಯಾದಿಕೇಶವನ
ಮೀಸಲಿನ ಪಾದಭಜನೆ ಕಡುಲೇಸು ಮನವೆ ||  ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment